ಉಡುಪಿ: ಹಿಂದುಳಿದ ವರ್ಗಗಳ ಅರ್ಹ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗುತ್ತಿದೆ.
ನಗರಸಭೆಯ 2023-24ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ.7.25 ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಈ ಸೌಲಭ್ಯ ನೀಡಲಾಗುತ್ತಿದೆ.
ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು ಅರ್ಜಿ ನಮೂನೆ ಅಥವಾ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು.

