ಉಡುಪಿ: ಅಂಚೆ ಇಲಾಖೆಗಳಲ್ಲಿ ಹೊಸ ತಂತ್ರಾಂಶಗಳನ್ನು ಅಳವಡಿಸುವ ಹಿನ್ನೆಲೆಯಲ್ಲಿ ನಾಳೆ ಮತ್ತು ಬುಧವಾರದಂದು ಕೆಲವು ಅಂಚೆ ಕಚೇರಿಗಳಲ್ಲಿ ಯಾವುದೇ ರೀತಿಯ ವ್ಯವಹಾರ ನಡೆಯುವುದಿಲ್ಲ.
ಮಣಿಪಾಲ ಪ್ರಧಾನ ಕಚೇರಿ, ಕುಂದಾಪುರ ಪ್ರಧಾನ ಕಚೇರಿ ಹಾಗೂ ಅದರ ವ್ಯಾಪ್ತಿಯಲ್ಲಿ ಬರುವ ಉಪ ಶಾಖಾ ಅಂಚೆ ಕಚೇರಿಗಳಲ್ಲಿ ಯಾವುದೇ ವ್ಯವಹಾರಗಳು ಇರುವುದಿಲ್ಲ.
ಆದರೆ ಉಡುಪಿಯ ಪ್ರಧಾನ ಅಂಚೆ ಕಚೇರಿ ಮತ್ತು ಅದರ ವ್ಯಾಪ್ತಿಯಲ್ಲಿ ಬರುವ ಉಪ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಈ ಬಗ್ಗೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಮಾಹಿತಿ ನೀಡಿದೆ.



