ಭಾರತೀಯ ಚಿತ್ರರಂಗದಲ್ಲಿ ಯಶಸ್ವೀ ಚಿತ್ರ ನಿರ್ಮಾಣ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್ ಸಿನಿಮಾ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಈಗಾಗಲೇ ಈ ನಿರ್ಮಾಣ ಸಂಸ್ಥೆ ಏಳು ಸಿನಿಮಾಗಳನ್ನು ಘೋಷಣೆ ಮಾಡಿದೆ.
ಆ್ಯನಿಮೇಶನ್ ಸಿನಿಮಾ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್ ಮಹಾವತಾರ ನರಸಿಂಹ ಎಂಬ ಸಿನಿಮಾ ಬಿಡುಗಡೆಯ ತಯಾರಿಯಲ್ಲಿದೆ. ಜು.೨೫ರಂದು ಚಿತ್ರ ರಿಲೀಸ್ ಆಗಲಿದೆ. ಘರ್ಜಿಸಲು ಉತ್ಸಾಹಭರಿತರಾಗಿದ್ದೇವೆ. ನೋಡಲು ಸಿದ್ಧರಾಗಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.
ಈಗಾಗಲೇ ಟೀಸರ್ ಬಿಡುಗಡೆಯಾಗಿದ್ದು ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು ೨.೫ ಮಿಲಿಯನ್ ವೀಕ್ಷಣೆ ಪಡೆದಿದೆ.

