ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮತ್ತೆ ಹೊಡೆದಾಟವಾಗಿದ್ದು ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ. ನಗರದ ಕೊಡಿಯಾಲ್ ಬೈಲಿನ ಜೈಲಿನ ಒಳಗಡೆ ಗಲಾಟೆ ನಡೆದಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಉಳ್ಳಾಲದ ನಟೋರಿಯಸ್ ರೌಡಿ ಮುಖಾರ್ ಹಾಗೂ ಪುತ್ತೂರಿನ ಅಕ್ಷಯ್ ಕಲ್ಲೇಗ ಹತ್ಯೆ ಆರೋಪಿ ಪ್ರಕರಣದ ಆರೋಪಿ ಕೇಶವ ಎಂಬಾತನ ಮಧ್ಯೆ ಗಲಾಟೆ ನಡೆದಿದ್ದು ಮುಖಾರ್ ಕೇಶವನ ಮೇಲೆ ಹಲ್ಲೆ ನಡೆಸಿದ್ದಾನೆ. ಈತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಗಲಾಟೆ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮತ್ತು ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


