ಮುಂಬೈ: ನಟ ಪುನೀತ್ ರಾಜ್ ಕುಮಾರ್ ಜೊತೆ ನಾ ಬೋರ್ಡು ಇರದ ಬಸ್ಸನ್ನು ಎಂಬ ಹಾಡಿಗೆ ಮಸ್ತ್ ಆಗಿ ಕುಣಿದು ಯುವಕರನ್ನು ಮನಸೂರೆಗೊಳಿಸಿದ್ದ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರಿಗೆ ನಲ್ವತ್ತೆರಡು ವರ್ಷ ಪ್ರಾಯವಾಗಿತ್ತು. ನಿನ್ನೆ ಬೆಳಿಗ್ಗೆ ಇವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು.
ಮಾಡೆಲ್ ಆಗಿ, ಓರ್ವ ನಟಿಯಾಗಿ ಇವರು ಗುರುತಿಸಿಕೊಂಡಿದ್ದರು. ಇದೀಗ ಇವರ ಸಾವು ಅಭಿಮಾನಿಗಳಿಗೆ, ಚಿತ್ರರಂಗದವರಿಗೆ ಶಾಕ್ ನೀಡಿದ್ದು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

