ಮಂಗಳೂರು: ದುಬಾರಿ ಕಾರು ರಿಜಿಸ್ಟರ್ ಸಂದರ್ಭ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ಆರ್ ಟಿಒ ಕಚೇರಿಯ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಆರ್ ಟಿಒ ಕಚೇರಿಯ ಪ್ರಥಮ ದರ್ಜೆ ಸಹಾಯಕ ನೀಲಪ್ಪ, ಕಚೇರಿಯ ಅಧೀಕ್ಷಕಿ ರೇಖಾ ನಾಯಕ್, ಸ್ಥಾನೀಯ ಸಹಾಯಕಿ ಸರಸ್ವತಿ ಅಮಾನತುಗೊಂಡ ಅಧಿಕಾರಿಗಳು. ಒಂದು ಕೋಟಿ ಮೌಲ್ಯದ ಐಷಾರಾಮಿ ಕಾರನ್ನು ಮೂವತ್ತೆರಡು ಲಕ್ಷ ರೂ.ಗೆ ನಕಲಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಕೊಂಡಿದ್ದಾರೆ.
ತೆರಿಗೆ ವಂಚನೆ ವರದಿಯ ಮೇರೆಗೆ ಬೆಂಗಳೂರಿನ ಆಯುಕ್ತರು ಅಮಾನತುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.


