ಮಂಗಳೂರು: ಇನ್ನೇನೋ ಕೆಲವೇ ತಿಂಗಳಲ್ಲಿ ನವರಾತ್ರಿ ಸಂಭ್ರಮ ಸಮೀಪಿಸುತ್ತಿದೆ. ಮೈಸೂರಿನಲ್ಲಿ ಈ ಬಾರಿ ಅದ್ಧೂರಿಯಾಗಿ ದಸರಾ ಆಚರಿಸಲು ಸಕಲ ರೀತಿಯ ಸಿದ್ಧತೆಗಳು ನಡೆಯುತ್ತಿದೆ. ದಸರಾವನ್ನು ಈ ಬಾರಿ ಮತ್ತಷ್ಟು ವಿಭಿನ್ನವಾಗಿ ನಡೆಸಲು ಈ ಬಾರಿ ಕಂಬಳ ಕ್ರೀಡೆಯನ್ನು ಮೈಸೂರಿನಲ್ಲಿ ಆಯೋಜನೆ ಮಾಡಲು ನಿರ್ಧರಿಸಲಾಗಿದೆ.
ಮೈಸೂರು ಕಾರ್ಯಕ್ರಮದ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆದಿದೆ. ಈ ಸಂದರ್ಭ ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ನಡೆಸುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ.
ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಲ್ಲಿ ಕೇಳಿದ್ದಾರೆ. ಸರ್ಕಾರದ ಒಪ್ಪಿಗೆಯಿಂದ ಇದನ್ನು ಯಶಸ್ವಿ ಮಾಡಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

