ಬ್ರಹ್ಮಾವರ ತಾಲ್ಲೂಕಿನ ಕುಂಜಾಲು ಮುಖ್ಯರಸ್ತೆಯ ರಾಮ ಮಂದಿರ ಸಮೀಪ ದನದ ರುಂಡ ಎಸೆದ ಪ್ರಕರಣದಲ್ಲಿ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಪ್ರಕರಣದ ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಶೀಘ್ರವೇ ಬಂಧಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಪ್ರಕರಣದ ಆರೋಪಿಗಳಾದ ಕುಂಜಾಲು ಗ್ರಾಮದ ನಿವಾಸಿಗಳಾದ ರಾಮ (49), ಪ್ರಸಾದ್ (21) , ನವೀನ್ (35) , ಕೇಶವ ನಾಯ್ಕ್ (50), ಸಂದೇಶ್ (35), ರಾಜೇಶ್ (28) ಅವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ .
ಆರೋಪಿಗಳು ದನವನ್ನು ಮಾಂಸಮಾಡಿ ನಂತರ ಅದರ ಕಳೇಬರವನ್ನು ವಿಲೇವಾರಿ ಮಾಡಲು ಸ್ಕೂಟರ್ ನಲ್ಲಿ ಹೋಗುವಾಗ ರಸ್ತೆಗೆ ಬಿದ್ದಿರುವುದಾಗಿ ತಿಳಿಸಿರುತ್ತಾರೆ.
ಆರೋಪಿಗಳನ್ನು ಶೀಘ್ರ ಪತ್ತೆಗೆ ಶ್ರಮಿಸಿದ ಪೊಲೀಸ್ ಇಲಾಖೆಗೆ ಶಾಸಕ ಯಶಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದು, ಸಾರ್ವಜನಿಕ ವಲಯದಲ್ಲೂ ಭಾರೀ ಪ್ರಶಂಸೆ ವ್ಯಕ್ತವಾಗಿದೆ

