ಚಿಕ್ಕಮಗಳೂರು: ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಚಿಕ್ಕಮಗಳೂರಿನ ಖ್ಯಾತ ಪ್ರವಾಸಿ ತಾಣವಾದ ಎತ್ತಿನಭುಜ ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿದೆ.
ಪಶ್ಚಿಮ ಘಟ್ಟದಲ್ಲಿ ಮಳೆ ಮುದುವರೆದಿರುವುದರಿಂದ ಚಾರಣಕ್ಕೆ ಹೋಗಲು ಸ್ವಲ್ಪ ಕಷ್ಟ. ಪ್ರವಾಸಿಗರ ಹಿತದೃಷ್ಟಿಯಿಂದ ಚಾರಣಕ್ಕೆ ನಿರ್ಬಂಧ ಹೇರಲಾಗಿದೆ.
ಅಲ್ಲಿ ಕೆಲವು ಮರಗಳು ಕೂಡಾ ಬೀಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಪ್ರವಾಸಿಗರಿಗೆ ಮನವರಿಕೆ ಮಾಡಲು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಇಂದಿನಿಂದ ಜು.31ರವರೆಗೆ ಎತ್ತಿನ ಭುಜಕ್ಕೆ ನಿರ್ಬಂಧ ವಿಧಿಸಲಾಗಿದೆ.

