ಉಡುಪಿ: ಖಾಸಗಿ ಎಕ್ಸ್ ಪ್ರೆಸ್ ಬಸ್ ನ ಚಕ್ರದಡಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಬಸ್ ನ ಚಕ್ರದಡಿಗೆ ಸಿಲುಕಿದ ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

