ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಶುಭಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರವು ಪ್ರತಿ ವರ್ಷ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನದಡಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ 1ನೇ ತರಗತಿಯಿಂದ ವೃತ್ತಿಪರ ಕೋರ್ಸ್ಗಳನ್ನು ಕಲಿಯುತ್ತಿರುವ ಬೀಡಿ, ಸುಣ್ಣದ ಕಲ್ಲು, ಡೈನಾಮೈಟ್ ಗಣಿಗಾರರು ಮತ್ತು ಚಲನಚಿತ್ರ ಕಾರ್ಮಿಕರ ಮಕ್ಕಳಿಗೆ 2025-26ರ ಹಣಕಾಸು ವರ್ಷಕ್ಕೆ 1000 ರೂ.ನಿಂದ 25,000 ರೂ.ವರೆಗಿನ ಶೈಕ್ಷಣಿಕ ವಿದ್ಯಾರ್ಥಿವೇತನಕ್ಕಾಗಿ ಎಲೆಕ್ಟ್ರಾನಿಕ್ ರೂಪದಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನ ಅಗಸ್ಟ್ 31 ಆಗಿರುತ್ತದೆ. ಸಂಬಂಧಪಟ್ಟ ಸೂಕ್ತ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿ ವೇತನದ ಅಧಿಕೃತ ವೆಬ್ಸೈಟ್ ಪರಿಶೀಲಿಸಬೇಕು.


