ಉಡುಪಿ: ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿಂದೂ ಜಾಗರಣ ವೇದಿಕೆಯ ಮುಖಂಡ, ರೌಡಿ ಶೀಟರ್ ಎಂದೇ ಕರೆಯಲಾಗುವ ಸತೀಶ್ ಪೂಜಾರಿ ಎಂಬಾತನಿಗೆ ಇಂದಿನಿಂದ ಸಪ್ಟೆಂಬರ್ ಏಳರವರೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಇಂದು ರಾಜ್ಯ ಸರ್ಕಾರದ ವಿರುದ್ಧ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಗೆ ಸತೀಶ್ ಪೂಜಾರಿಯನ್ನು ಕರೆಯುವ ಸಾಧ್ಯತೆ ಇತ್ತು. ಈ ಹಿನ್ನೆಲೆ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.
ಸತೀಶ್ ಪೂಜಾರಿ ವಿರುದ್ಧ ಒಟ್ಟು ಹತ್ತೊಂಭತ್ತು ಪ್ರಕರಣಗಳು ದಾಖಲಾಗಿವೆ. ಇವರಿಂದ ಸಮಾಜದ ಸ್ವಾಸ್ಥ್ಯ ಹಾಳಾಗದಂತೆ ತಡೆಯಲು ಡಿಸಿ ಈ ಆದೇಶವನ್ನು ಹೊರಡಿಸಿದ್ದಾರೆ.

