ಉಡುಪಿ: ಟ್ರೇಡಿಂಗ್ ಆ್ಯಪ್ನಲ್ಲಿ ಹಣ ಹೂಡಿಕೆಯ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ 5,42,500 ರೂ. ವಂಚಿಸಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣ್ರಾಜ್ ಎಂಬಾತ ಹಣ ಕಳೆದುಕೊಂಡ ವ್ಯಕ್ತಿ. ಜೂ. 13ರಂದು ಯಾರೋ ಅಪರಿಚಿತ ವ್ಯಕ್ತಿ ಯೋರ್ವ ಸಂಪರ್ಕಿಸಿ ಟ್ರೇಡಿಂಗ್ ಆ್ಯಪ್ನ ಬಗ್ಗೆ ಮಾಹಿತಿ ನೀಡಿ ಹಣ ಹೂಡಿಕೆ ಮಾಡುವಂತೆ ಪ್ರಚೋದಿಸಿದ್ದನು.
ಅದರಂತೆ ಅರುಣ್ರಾಜ್ ಅವರು ಬೇರೆ ಬೇರೆ ಖಾತೆಗಳಿಗೆ 5,42,500 ರೂ. ಹೂಡಿಕೆ ಮಾಡಿದ್ದಾರೆ. ಹೂಡಿಕೆ ಮಾಡಿದ ಹಣ ಅಥವಾ ಲಾಭಾಂಶ ನೀಡದೇ ವಂಚಿಸಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಾರೆ.

