ಕಾಂತಾರ-1 ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ತನ್ನ ಪತ್ನಿ ಮಕ್ಕಳ ಸಮೇತ ಪ್ರಖ್ಯಾತ ಆನೆಗುಡ್ಡೆ ಶ್ರೀವಿನಾಯಕ ದೇಗುಲಕ್ಕೆ ಭೇಟಿ ನೀಡಿದ್ದಾರೆ.
ಈ ಬಾರಿ ಕುಂದಾಪುರದಲ್ಲೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟ ರಿಷಬ್ ಶೆಟ್ಟಿ ಅವರು ಆನೆಗುಡ್ಡೆ ದೇವಸ್ಥಾನದಲ್ಲಿ ಕೂಡಾ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡರು.
ಕ್ಷೇತ್ರದಲ್ಲಿ 108 ತೆಂಗಿನಕಾಯಿ ಒಡೆದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಇನ್ನು ಈ ಸಂದರ್ಭ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಕೂಡಾ ಅಗತ್ಯ ವಸ್ತುಗಳನ್ನು ನೀಡಿ ಅನ್ನದಾನ ಮಾಡಲಾಯಿತು. ಶಾಲಾ ಮಕ್ಕಳ ಶಿಕ್ಷಣಕ್ಕೆ ಪೂರಕವಾಗುವ ವಸ್ತುಗಳನ್ನು ಕೂಡಾ ವಿತರಿಸಲಾಯಿತು.

