ಮಂಗಳೂರು: ಕಾರು ಮತ್ತು ಸ್ಕೂಟರ್ ಮಧ್ಯೆ ನಡೆದಿದ್ದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಡಿಮ್ಯಾಂಡ್ ಮಾಡಿದ ಹೆಡ್ ಕಾನ್ಸ್ಟೇಬಲ್ ಓರ್ವನನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕದ್ರಿ ಟ್ರಾಫಿಕ್ ಠಾಣೆಯ ಹೆಡ್ ಕಾನ್ಸ್ಟೇಬಲ್ ತಸ್ಲೀಂ ಲಂಚಕ್ಕೆ ಬೇಡಿಕೆಯಿಟ್ಟ ಧನದಾಹಿ ಆಗಿದ್ದಾರೆ. ನಂತೂರ್ ನಲ್ಲಿ ಸಂಭವಿಸಿದ್ದ ಅಪಘಾತದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರಿನ ಮಾಲಕರು ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಹೋದಾಗ ತಸ್ಲೀಂ ಅವರು ಐವತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನೆಲೆ ಕಾರಿನ ಮಾಲಕರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದು ಕಾರ್ಯಾಚರಣೆ ನಡೆಸಿ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ.


