ಬ್ರಹ್ಮಾವರ: ಹಣ ಹೂಡಿಕೆ ವಿಚಾರದಲ್ಲಿ ಹೆಚ್ಚಿನ ಲಾಭ ಪಡೆಯುವ ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಮಾಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಸುಗುಣ ಎಂಬವರಿಗೆ ವರ್ಕ್ ಫ್ರಂ ಹೋಂ ಹೆಸರಿನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಬರುವ ಜಾಹೀರಾತನ್ನು ಸೈಬರ್ ಅಪರಾಧಿಗಳು ಕಳುಹಿಸಿದ್ದರು.
ಇದನ್ನು ನಂಬಿ ಆರೋಪಿಗಳು ಕಳುಹಿಸಿದ ಬ್ಯಾಂಕ್ ಖಾತೆಗೆ 3,92,250ರೂ. ಯನ್ನು ಹೂಡಿಕೆ ಮಾಡುವ ಉದ್ದೇಶದಿಂದ ವರ್ಗಾಯಿಸಿ ಮೋಸ ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

