ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚಿಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ.
ನಗರದ ಬೆಂದೂರ್ ವೆಲ್ ನಲ್ಲಿರುವ ಹೈರ್ ಗ್ಲೋ ಎಲಿಗೆಂಟ್ ಓವರ್ ಸೀಸ್ ಇಂಟರ್ನ್ಯಾಷನಲ್ ಪ್ರೈ.ಲಿ ಎಂಬ ಕಂಪೆನಿಯು ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಕೋಟ್ಯಾಂತರ ರೂ ವಂಚಿಸಿದೆ.
ಕೆ-ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದರೆ ಆರೋಪಿಗಳಿಗೆ ಜಾಮೀನು ಸಿಗುವುದು ಕಷ್ಟವಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

