ಬ್ರಹ್ಮಾವರ: ಯಾವುದೇ ಲೈಸೆನ್ಸ್ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್ ಬಳಿ ನಡೆದಿದೆ.
ಹಂದಾಡಿ ಗ್ರಾಮದ ಉಮೇಶ ಪೂಜಾರಿ ಬಂಧಿತ ಆರೋಪಿ. ಈತ ಬ್ರಹ್ಮಾವರದ ವೈನ್ ಶಾಪ್ ನಿಂದ ಮದ್ಯ ಖರೀದಿಸಿ ಯಾವುದೇ ಪರವಾನಿಗೆ ಇಲ್ಲದೆ ಹೆಚ್ಚಿನ ಬೆಲೆಗೆ ಸ್ಕೂಟರ್ ನಲ್ಲಿ ಮಾರಾಟ ಮಾಡುತ್ತಿದ್ದ.
ಈತನಿಂದ ಪೊಲೀಸರು ಸ್ಕೂಟರ್ ಹಾಗೂ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

