ಮಂಗಳೂರು: ಪಾದಚಾರಿ ಮಹಿಳೆಗೆ ಬೊಲೆರೋ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದಿದೆ.
ಕೇರಳ ಮೂಲದ ಐವತ್ತೆಂಟು ವರ್ಷದ ಕಮಲ ಮೃತ ದುರ್ದೈವಿ. ಇವರ ಮಗಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು ತಾಯಿ ಮತ್ತು ಪುತ್ರಿ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು.
ಅಪಾರ್ಟ್ಮೆಂಟ್ ಗೆ ಹೋಗಲು ರಸ್ತೆ ದಾಟುತ್ತಿದ್ದ ಸಂದರ್ಭ ಕಮಲ ಅವರಿಗೆ ಬೊಲೆರೋ ಢಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

