ಧರ್ಮಸ್ಥಳ: ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದಲ್ಲಿ ಹೆಣ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ನೀಡಿರುವ ಮಾಹಿತಿಯನ್ನು ಹೊರತುಪಡಿಸಿ ಎಐಯನ್ನೊಳಗೊಂಡ ವೀಡಿಯೋವನ್ನು ಯೂಟ್ಯೂಬ್ನಲ್ಲಿ ಹರಿಬಿಟ್ಟ ಆರೋಪದ ಮೇಲೆ ಖ್ಯಾತ ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ನೂರಾರು ಹೆಣಗಳನ್ನು ಹೂತು ಹಾಕಿರುವ ಬಗ್ಗೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಸಮೀರ್ ಅವರಯ ಅದಕ್ಕೆ ಸಂಬಂಧಿಸಿ ವೀಡಿಯೋವೊಂದನ್ನು ಮಾಡಿ ಯೂಟ್ಯೂಬ್ ನಲ್ಲಿ ಹಾಕಿದ್ದಾರೆ.
ಸಾರ್ವಜನಿಕರನ್ನು ಪ್ರಚೋದಿಸುವ ಉದ್ದೇಶದಿಂದ ಎಐ ಬಳಸಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕೇಸು ದಾಖಲಾಗಿದೆ.

