ಮಂಗಳೂರು: ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಾಗಿದೆ.
ಕಿನ್ನಿಗೋಳಿಯ ಪಿಂಟೋ ಗಾರ್ಡನ್ ಮಾಲೀಕ ಉದ್ಯಮಿ ರಾಕಿ ಪಿಂಟೋ (೬೮) ಪ್ರಕರಣದ ಆರೋಪಿಯಾಗಿದ್ದಾನೆ. ಆತನ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದ ಮಹಿಳೆಯೋರ್ವರು ಬಾಲಕಿಯನ್ನು ಶಾಲೆಗೆ ಬಿಡುವ ನೆಪದಲ್ಲಿ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರನ್ನು ನೀಡಿದ್ದಾರೆ.
ಕಾರು ಸಹಿತ ರಾಕಿ ಪಿಂಟೋ ಅವರನ್ನು ಬಂಧಿಸಲು ಪೊಲೀಸರು ಹೋದಾಗ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


