ಉಡುಪಿ: ಪಡುಬಿದ್ರಿ, ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆ ಕಳವು ಪ್ರಕರಣ ನಡೆದಿತ್ತು. ಇದಕ್ಕೆ ಸಂಬಂಧಿಸಿ ಅಂತರ್ ರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪಡುಬಿದ್ರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಬ್ರಾಹಿಂ ಕಲಂದರ್, ರಿಯಾಜ್ ಬಂಧಿತ ಆರೋಪಿಗಳು. ಇವರು ಕಳ್ಳತನಕ್ಕೆ ಉಪಯೋಗಿಸಿದ ಕಾರು ಮತ್ತು ಇಪ್ಪತ್ನಾಲ್ಕು ಸಾವಿರ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇವರಿಬ್ಬರು ಆರೋಪಿಗಳ ವಿರುದ್ಧ ಅನೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಇದೀಗ ಪೊಲೀಸರು ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

