ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಕಳೆದ ಕೆಲವು ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು ಇಂದು ನಿಧನರಾಗಿದ್ದಾರೆ.
ಇವರಿಗೆ ಎಂಭತ್ತೇಳು ವರ್ಷ ವಯಸ್ಸಾಗಿತ್ತು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಅಮೋಘವಾದ ಸೇವೆಯನ್ನು ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಹಿರಿಮೆ ಇವರದ್ದು. ಇವರು ೧೯೬೯ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
ಬಬ್ರುವಾಹನ, ಸ್ಕೂಲ್ ಮಾಸ್ಟರ್, ಭೂಕೈಲಾಸ, ಕಥಾಸಾಗರ ಇತ್ಯಾದಿ ಅನೇಕ ಚಿತ್ರಗಳಲ್ಲಿ ನಟಿಸಿರುವ ಇವರು 2009ರಲ್ಲಿ ರಿಲೀಸ್ ಆದ ಪುನೀತ್ ರಾಜ್ ಕುಮಾರ್ ಅವರ `ನಟ ಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿದೆ.
ಅಭಿನಯಕ್ಕೊಂದು ಭಾಷ್ಯ ಬರೆದ ಇವರಿಗೆ ಅಭಿನಯ ಶಾರದೆ ಎಂಬ ಬಿರುದು ತನ್ನಿಂದ ತಾನಾಗಿಯೇ ಒಲಿದು ಬಂದಿತ್ತು. ಪತಿಯ ನಿಧನದ ನಂತರ ಅನೇಕ ರೀತಿಯ ಸಮಸ್ಯೆಗಳನ್ನು ಇವರು ಎದುರಿಸಿದರು. ಸಿನಿಮಾದಲ್ಲಿ ಇವರ ಅಭಿನಯಕ್ಕೆ ಅದೆಷ್ಟೋ ಲಕ್ಷಾಂತರ ಅಭಿಮಾನಿಗಳು ಫಿದಾ ಆಗಿದ್ದರು. ಮತ್ತೊಂದು ವಿಶೇಷತೆ ಎಂದರೆ ಅವರು ಚಲನಚಿತ್ರಗಳಲ್ಲಿ ನಟಿಸುವಾಗ ಧರಿಸುತ್ತಿದ್ದ ಎಲ್ಲಾ ಆಭರಣಗಳು ಅವರ ಸ್ವಂತದ್ದೇ ಆಗಿದ್ದವು.
ಇಹದ ಯಾತ್ರೆ ಮುಗಿಸಿ ಹೊರಟಿರುವ ಸರೋಜಾದೇವಿ ಅವರ ಅಂತ್ಯಕ್ರಿಯೆ ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ನಡೆಯಲಿದೆ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭಿಸಿದೆ.

