ಭಾರತೀಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಗೆ ಅವರದ್ದೇ ಆದ ಅದೆಷ್ಟೋ ಅಭಿಮಾನಿ ಬಳಗವಿದೆ. ಇದೀಗ ಅವರ ವೈಯಕ್ತಿಕ ಜೀವನದ ಸುದ್ದಿಯೊಂದು ಸಖತ್ ವೈರಲ್ ಆಗುತ್ತಿದ್ದು ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿದೆ. ಅವರು ಪತಿ ಪರುಪಳ್ಳಿ ಕಶ್ಯಪ್ ಅವರಿಂದ ಬೇರ್ಪಡುತ್ತಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸೈನಾ ನೆಹ್ವಾಲ್ ಅಧಿಕೃತವಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮುಖೇನ ಏಳು ವರ್ಷದ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ಬ್ರೇಕ್ ಹಾಕಿರುವುದರ ಬಗ್ಗೆ ದೃಢಪಡಿಸಿದ್ದಾರೆ.
ಕೆಲವೊಮ್ಮೆ ಜೀವನವು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಚಿಂತಿಸಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. ನಮ್ಮಿಬ್ಬರಿಗಾಗಿ ಈ ಮಾರ್ಗವನ್ನು ಆರಿಸಿಕೊಳ್ಳುತ್ತಿದ್ದೇವೆ. ನಮ್ಮ ಗೌಪ್ಯತೆಯನ್ನು ಅರ್ಥ ಮಾಡಿಕೊಂಡು ಗೌರವಿಸಿದಕ್ಕಾಗಿ ಧನ್ಯವಾದಗಳು ಎಂದು ನೆಹ್ವಾಲ್ ಬರೆದುಕೊಂಡಿದ್ದಾರೆ.

