ಬೈಂದೂರು : ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ರಾಮಚಂದ್ರ ಶೇರುಗಾರ್ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಒಂದು ವಾರದ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಶೇರುಗಾರ್ ಅವರನ್ನು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಅವರು ಅಸುನೀಗಿದ್ದಾರೆ, ರಾಮಚಂದ್ರ ಶೇರುಗಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಇನ್ನೊಂದು ವಾರದಲ್ಲಿ ಎಎಸ್ಐ (ASI) ಹುದ್ದೆಗೆ ಪದೋನ್ನತಿ ಪಡೆಯಬೇಕಿತ್ತು ಎಂದು ತಿಳಿದುಬಂದಿದೆ.
ಅವರ ಅಕಾಲಿಕ ನಿಧನಕ್ಕೆ ಗಂಗೊಳ್ಳಿ ಠಾಣಾಧಿಕಾರಿ ಪವನ್ ನಾಯಕ್, ಬಸವರಾಜ್ ಕನಶೆಟ್ಟಿ ಹಾಗೂ ಇತರ ಪೊಲೀಸ್ ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

