ಉಡುಪಿ: ನಗರದ ಗುಂಡಿಬೈಲು ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಖ್ಯಾತ ಸಾನ್ವಿ ಟ್ರೇಡರ್ಸ್ ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ, ಐಟಿಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಭೇಟಿ ನೀಡಬಹುದು. ಅಥವಾ ದೂ.ಸಂಖ್ಯೆ: 8105618291, 9945856670, 8105774936 ಹಾಗೂ 9901472710ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

