ಬ್ರಹ್ಮಾವರ: ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವರು ಮಾನಸಿಕ ಖಿನ್ನತೆಗೊಳಗಾಗಿ ನೇಣಿಗೆ ಶರಣಾದ ಘಟನೆ ಬ್ರಹ್ಮಾವರದ ಚೇರ್ಕಾಡಿ ಎಂಬಲ್ಲಿ ನಡೆದಿದೆ.
ಚೇರ್ಕಾಡಿಯ ಇಪ್ಪತ್ತು ವರ್ಷದ ರಶ್ಮಿತಾ ಆತ್ಮಹತ್ಯೆಗೊಳಗಾದ ವಿದ್ಯಾರ್ಥಿನಿ. ಇವರು ಬಿಎಸ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಸುಮಾರು ಆರು ತಿಂಗಳಿನಿಂದ ಮನೆಯಲ್ಲೇ ಇದ್ದರು.
ಕಳೆದ ಎರಡೂವರೆ ತಿಂಗಳಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಕೂಡಾ ಪಡೆಯುತ್ತಿದ್ದರು. ಇದ್ದಕಿದ್ದಂತೆ ದುಡುಕಿನ ನಿರ್ಧಾರ ತೆಗೆದುಕೊಂಡು ಸಾವಿಗೀಡಾಗಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

