ಮಂಗಳೂರು: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾ.ಹೆ 66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣವಾಗಿ ಹಾನಿಯಾಗಿದೆ.
ಅದನ್ನು ದುರಸ್ತಿ ಪಡಿಸುವ ಕಾರಣದಿಂದಾಗಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇಂದು ರಾತ್ರಿ 8ಗಂಟೆಯಿಂದ ಜು.24ರ ರಾತ್ರಿ 8ಗಂಟೆಯವರೆಗೆ ವಾಹನ ಸಂಚಾರ ಬಂದ್ ಮಾಡಲು ಎನ್ ಎಚ್ ಎಐ ಮುಂದಾಗಿದೆ.
ಕೂಳೂರು ಸೇತುವೆಯ ದುಸ್ಥಿತಿ ಇಂದು ನಿನ್ನೆಯದಲ್ಲ. ಸಣ್ಣಪುಟ್ಟ ದುರಸ್ಥಿ ಕಾರ್ಯ ಕೈಗೊಂಡಿದ್ದರೂ ಈ ಬಿರುಸಿನ ಮಳೆಯಿಂದಾಗಿ ರಸ್ತೆ ಮತ್ತೆ ಮತ್ತೆ ಹಾಳಾಗುತ್ತಿದೆ. ಆದ್ದರಿಂದ ಮತ್ತೆ ದುರಸ್ಥಿ ಕಾರ್ಯ ಕೈಗೊಳ್ಳಲಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ಎನ್ ಎಚ್ಐಎ ಮನವಿ ಮಾಡಿದೆ.

