ಮಣಿಪಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಐದು ಕಡೆಗಳಲ್ಲಿ ಪೊಲೀಸರು ದಿಢೀರ್ ಕಾರ್ಯಾಚರಿಸಿ, ಮದ್ಯಪಾನ ಮಾಡಿ ವಾಹನ ಚಲಾಯಿಸಿದವರನ್ನು ಪತ್ತೆ ಹಚ್ಚಿ ವಿಶೇಷ ತಪಾಸಣೆ ನಡೆಸಿ ಹದಿನೆಂಟು ಕಾರುಗಳು, ಮೂರು ಬೈಕ್ ಗಳು ಸೇರಿದಂತೆ ಒಟ್ಟು ಇಪ್ಪತ್ತೊಂದು ವಾಹನಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದವರಿಂದ ಲಕ್ಷಾಂತರ ರೂ. ದಂಡ ವಸೂಲಿ ಮಾಡಲಾಗಿದೆ. ಅಜಾಗರೂಕ ಚಾಲನೆ ಮತ್ತು ಮದ್ಯಪಾನ ಸೇವಿಸಿ ಚಲಾಯಿಸಿದವರಿಗೆ ಹತ್ತು ಸಾವಿರ ರೂ. ದಂಡ ವಿಧಿಸಲಾಗಿದೆ.
ಉಡುಪಿ ಪೊಲೀಸ್ ಅಧೀಕ್ಷಕರ ಸೂಚನೆಯ ಮೇರೆಗೆ ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ಠಾಣಾ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

