ಧರ್ಮಸ್ಥಳ: ಪ್ರತಿದಿನ ಹಸಿಬಿಸಿ ಸುದ್ದಿಯಲ್ಲಿರುವ ಧರ್ಮಸ್ಥಳ ಹತ್ಯೆ ಪ್ರಕರಣದ ತನಿಖೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಸುದ್ದಿ ಬೆಳಕಿಗೆ ಬಂದಿದೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವರ ದರ್ಶನಕ್ಕೆ ಹೋಗಿದ್ದ ಶಿಕ್ಷಕರೊಬ್ಬರು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕುಷ್ಟಗಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಬಸವರಾಜ ಪೊಲೀಸ್ ಪಾಟೀಲ (೩೫) ಮೃತ ದುರ್ದೈವಿ. ಇವರು ಧರ್ಮಸ್ಥಳ ಕ್ಷೇತ್ರದ ಸಮೀಪ ಶವವಾಗಿ ಪತ್ತೆಯಾಗಿದ್ದಾರೆ.
ಒಂದೂವರೆ ವರ್ಷದಿಂದ ಇವರು ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ ಧರ್ಮಸ್ಥಳ ಕ್ಷೇತ್ರ ದರ್ಶನಕ್ಕೆ ಬಂದ ಅವರ ಮೃತದೇಹ ನೇತ್ರಾವತಿ ಸೇತುವೆಯ ಕೆಳಭಾಗ ಹಳೆಯ ರಸ್ತೆಯಲ್ಲಿ ಪತ್ತೆಯಾಗಿದೆ. ಇವರ ಸಾವಿಗೆ ಕಾರಣ ತಿಳಿದುಬಂದಿಲ್ಲ. ಆದರೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ.

