ಮಂಗಳೂರು: ನಗರದ ಯುವ ಉದ್ಯಮಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ನಿತಿನ್ ಕೆ ಸುವರ್ಣ ನೇಣಿಗೆ ಕೊರಳೊಡ್ಡಿದ ವ್ಯಕ್ತಿಯಾಗಿದ್ದಾರೆ.
ಹೊಟೇಲ್ ಉದ್ಯಮಗಳಲ್ಲಿ ಸಕ್ರಿಯವಾಗಿದ್ದ ಇವರು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಆಪ್ತರ ವಲಯದಲ್ಲಿ ಗುರುತಿಸಿಕೊಂಡಿದ್ದರು. ನಿನ್ನೆ ರಾತ್ರಿ ಈ ಘಟನೆ ನಡೆದಿದೆ.
ಅಲ್ಲದೆ ಬಿಜೆಪಿ ಪಕ್ಷದಲ್ಲೂ ಕೂಡಾ ಸಕ್ರಿಯರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ.

