ಮಲ್ಪೆ: ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ವಾಹನ ಮತ್ತು ಮರಳನ್ನು ಮಲ್ಪೆ ಪೊಲೀಸರು ವಶ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಡವೂರು ಗ್ರಾಮದ ತೊಟ್ಟಂ ರಸ್ತೆ ಬಳಿ ಜು.22ರಂದು ವಾಹನ ತಪಾಸಣೆ ಮಾಡುತ್ತಿರುವಾಗ ಗೂಡ್ಸ್ ವಾಹನವೊಂದು ಹೂಡೆ ಕಡೆಯಿಂದ ಮಲ್ಪೆ ಕಡೆಗೆ ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಬಂದಿದ್ದು, ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ಅರ್ಧ ಯುನಿಟ್ನಷ್ಟು ಮರಳು ತುಂಬಿರುವುದು ಕಂಡು ಬಂದಿದೆ.
ಈ ಕುರಿತು ಚಾಲಕನನ್ನು ವಿಚಾರಣೆ ನಡೆಸಿದಾಗ ಮರಳು ಸಾಗಾಟದ ಬಗ್ಗೆ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ. ವಾಹನ ಮತ್ತು ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

