ಕಾರ್ಕಳ: ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಾಹನ ಸಂಚಾರಕ್ಕೂ ಕೂಡಾ ಕಷ್ಟವಾಗುತ್ತಿದೆ.
ಕಾರ್ಕಳದಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಆನೆಕೆರೆಯಲ್ಲಿ ಮರವೊಂದು ರಸ್ತೆಗೆ ಬಿದ್ದ ಘಟನೆ ನಡೆದಿದೆ. ಮರ ರಸ್ತೆಗೆ ಬಿದ್ದ ಪರಿಣಾಮ ರಸ್ತೆ ಸಂಪೂರ್ಣವಾಗಿ ಮುಚ್ಚಿ ಹೋಗಿದೆ.
ಅಲ್ಲದೆ ಸಂಚಾರಕ್ಕೂ ಕೂಡಾ ಅಡಚಣೆಯುಂಟಾಗಿದೆ. ಕೆಲಕಾಲ ಟ್ರಾಫಿಕ್ ಜಾಂ ಸಮಸ್ಯೆ ಕೂಡಾ ಕಂಡುಬಂದಿತ್ತು. ಇನ್ನೂ ಎರಡು ದಿನಗಳ ಕಾಲ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶಾಲಾ ಕಾಲೇಜು ಮಕ್ಕಳಿಗೂ ಕೂಡಾ ರಜೆ ಘೋಷಣೆ ಮಾಡಲಾಗಿದೆ.


