ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿರುವ ಅನಾಮಧೇಯ ದೂರುದಾರ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾನೆ.
ತನಿಖಾಧಿಕಾರಿಗಳಾದ ಎಂ.ಎನ್.ಅನುಚೇತ್ ಹಾಗೂ ಜಿತೇಂದ್ರ ಕುಮಾರ್ ದಯಾಮ ಅವರುಗಳು ದೂರುದಾರನನ್ನು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಐಬಿಯಲ್ಲಿ ಎಸ್ಐಟಿ ಕಚೇರಿ ತೆರೆಯಲಾಗಿದೆ. ಅನಾಮಧೇಯ ದೂರುದಾರನನ್ನು ಮುಸುಕು ಹಾಕಿ ಕರೆ ತರಲಾಗಿದೆ. ಬಾಡಿಗೆ ಕಾರಿನಲ್ಲಿ ಇಬ್ಬರು ವಕೀಲರೊಂದಿಗೆ ಎಸ್ಐಟಿ ಕಚೇರಿಗೆ ಆತ ಆಗಮಿಸಿದ್ದಾನೆ.
ಆತನನ್ನು ತನಿಖಾಧಿಕಾರಿಗಳ ಮುಂದೆ ಹಾಜರುಪಡಿಸಲಾಯಿತು. ತನಿಖಾಧಿಕಾರಿಗಳು ಆತನ ಹೇಳಿಕೆಗಳನ್ನು ವಿಡಿಯೋ ದಾಖಲೆ ಮಾಡುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಇಂದು ಆತನಲ್ಲಿ ಎಸ್ಐಟಿ ಅಧಿಕಾರಿಗಳ ಮಹತ್ವದ ಹೇಳಿಕೆಗಳನ್ನು ದಾಖಲಿಸಲಿದ್ದಾರೆ.

