ಕಾಪು: ಅಂದರ್-ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಐದು ಮಂದಿಯನ್ನು ಕಾಪು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಉಚ್ಚಿಲದ ಸುಲೇಮಾನ್, ಮಿಥುನ್, ಆತ್ರಾಡಿಯ ಚಂದ್ರಶೇಖರ್, ಅಮಾನುಲ್ಲಾ ಮತ್ತು ಸುರೇಶ್ ಬಂಧಿತ ಆರೋಪಿಗಳು. ಇವರು ಇಸ್ಪೀಟ್ ಆಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಇವರಿಂದ ಏಳು ಸಾವಿರದ ಐನೂರು ನಗದು ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























