ಉಡುಪಿ : ಹಿರಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪೆರ್ಡೂರು ಗ್ರಾಮದ ಬುಕ್ಕಿಗುಡ್ಡೆ ದರ್ಖಾಸು ಮನೆ ಸಂತೋಷ (44) ಆತ್ಮಹತ್ಯೆ ಮಾಡಿಕೊಂಡವರು. ಇವರು ಜು.28ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

