ಮುಲ್ಕಿ: ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಪುಟ್ಟ ಮಗು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ.
ಕುಂದಾಪುರದ ತೆಕ್ಕಟ್ಟೆ ನಿವಾಸಿಗಳಾದ ನಿತಿಲ್, ಅವಿನಾಶ್, ಮಗು ಮೃತ್ವಿನ್ ಗಂಭೀರವಾಗಿ ಗಾಯಗೊಂಡವರು. ಇನ್ನೊಂದು ಕಾರಿನಲ್ಲಿದ್ದ ಯುವಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ರಭಸಕ್ಕೆ ಎರಡು ಕಾರು ಪಲ್ಟಿಯಾಗಿದ್ದು ಕೆಲ ಹೊತ್ತು ಸಂಚಾರ ವ್ಯತ್ಯಯ ಕಂಡುಬಂದಿತ್ತು. ಅಪಘಾತದ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


