ಮೈಸೂರಿನ ಕೆ.ಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.
ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದಂತೆ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ.
ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜುಲೈ 30 ರಂದೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಬೇಕಿತ್ತು. ಆದರೆ, ಕೆಲವೊಂದು ಸ್ಪಷ್ಟೀಕರಣ ಬೇಕಿದ್ದರಿಂದ ತೀರ್ಪನ್ನು ಕಾಯ್ದಿರಿಸುತ್ತಿರುವುದಾಗಿ ಜಡ್ಜ್ ತಿಳಿಸಿದ್ದರು. ಇದೀಗ ಕೋರ್ಟ್ ತೀರ್ಪು ನೀಡಿದ್ದು ಶಿಕ್ಷೆಯ ಅವಧಿ ನಾಳೆ ಪ್ರಕಟಗೊಳ್ಳಲಿದೆ.


