ಬೆಂಗಳೂರು: ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ದೋಷಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ತೀರ್ಪು ನೀಡಿದ್ದು ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಮನೆ ಕೆಲಸದಾಕೆ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದೆ.
ಇನ್ನೂ ಮೂರು ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಇವತ್ತು ಒಟ್ಟು 424 ಪುಟಗಳ ತೀರ್ಪುನ್ನು ಪ್ರಕಟಿಸಿದೆ. ಐಪಿಸಿ ಸೆಕ್ಷನ್ 376 (2) (k) ಅಡಿಯಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಅಲ್ಲದೇ 5 ಲಕ್ಷ ರೂ. ದಂಡವನ್ನೂ ನ್ಯಾಯಾಲಯ ವಿಧಿಸಿದೆ. ಸಂತ್ರಸ್ತೆಗೂ 7 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.
ಪ್ರಜ್ವಲ್ ರೇವಣ್ಣಗೆ ಗರಿಷ್ಠ ಶಿಕ್ಷೆಯನ್ನು ಪ್ರಕಟಿಸಲಾಗಿದೆ. ಇಂದಿನಿಂದಲೇ ರೇಪಿಸ್ಟ್ ಪ್ರಜ್ವಲ್ಗೆ ಜೀವನಪರ್ಯಂತ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.


