ಕಾಪು : ಮೀನುಗಾರಿಕೆಗೆ ತೆರಳಿದ್ದ ನಾಡ ದೋಣಿಯೊoದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಲೈಟ್ ಹೌಸ್ ನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ದೋಣಿಯಲ್ಲಿದ್ದ ಏಳು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ದೋಣಿಯಲ್ಲಿದ್ದ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

ಸ್ಥಳೀಯ ಮೀನುಗಾರರಾದ ಪ್ರಶಾಂತ್ ಮತ್ತು ವಿನೋದ್ ಏಳು ಜನ ಮೀನುಗಾರರನ್ನು ರಕ್ಷಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಸಂಭಾವ್ಯ ದುರಂತವೊಂದನ್ನು ತಪ್ಪಿಸಿದ್ದಾರೆ. ಪ್ರಶಾಂತ್ ಮತ್ತು ವಿನೋದ್ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.


