ಶಿರ್ವ: ಕುಖ್ಯಾತ ಅಂತರ್ ರಾಜ್ಯ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ನನ್ನು ಅರೆಸ್ಟ್ ಮಾಡಿದ ಪೊಲೀಸರ ತಂಡ ಆತ ಕಳ್ಳತನಗೈದಿದ್ದ ಇಪ್ಪತ್ತೆರಡು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಟ್ಟಾರು ಬಬ್ಬರ್ಯ ದೇವಸ್ಥಾನದ ಬಳಿ ಮನೆಯೊಂದರಲ್ಲಿ ಕಳ್ಳತನಗೈದ ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಆದೇಶದಂತೆ ಪೊಲೀಸರ ತಂಡ ರಚಿಸಿ ತನಿಖೆ ಮಾಡಿ ಇದೀಗ ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ನನ್ನು ಪೊಲೀಸರು ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.


