ಮಂಗಳೂರು: ಪುತ್ತೂರು ಮೂಲದ ಯುವ ವೈದ್ಯೆಯೊಬ್ಬರು ಮಂಗಳೂರಿನಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ಚಾರ್ಟೆಡ್ ಅಕೌಂಟೆಂಟ್ ಗಣೇಶ್ ಜೋಶಿ ಪುತ್ರಿ ಕೀರ್ತನಾ ಜೋಶಿ ಆತ್ಮಹತ್ಯೆಗೆ ಶರಣಾದ ಮಹಿಳೆ.
ಪಶು ವೈದ್ಯಕೀಯದಲ್ಲಿ ಇವರು ಎಂ.ಡಿ ಪದವಿ ಮುಗಿಸಿ ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದ್ದಕಿದ್ದಂತೆ ಮಂಗಳೂರಿನ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಪುತ್ತೂರಿನ ಮನೆಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಇವರು ತಂದೆ ತಾಯಿ ಮತ್ತು ಸೋದರಿಯನ್ನು ಅಗಲಿದ್ದಾರೆ.


