ಮಂಗಳೂರು: ನಗರದ ಹೊರವಲಯದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಗೆ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೊಕ್ಸೊ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
15 ವರ್ಷದ ಬಾಲಕಿ ಮೇಲೆ ಆರೋಪಿ ಅತ್ಯಾಚಾರ ನಡೆಸಿದ ಪ್ರಕರಣ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ಆರೋಪಿ ಸಂದೇಶ್ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ-ಎಫ್.ಟಿ.ಎಸ್.ಸಿ. ನ್ಯಾಯಾಧೀಶ ಮಾನು ಕೆ.ಎಸ್. ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

