ಕುಂದಾಪುರ: ಮೂಡ್ಲಕಟ್ಟೆ ರೈಲು ನಿಲ್ದಾಣ ಸಮೀಪ ರೈಲು ಹಳಿ ದಾಟುತ್ತಿದ್ದ ಯುವಕನಿಗೆ ಮಡಗಾಂವ್ನಿಂದ ಎರ್ನಾಕುಲಂಗೆ ಸಂಚರಿಸುತ್ತಿದ್ದ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ಯುವಕನನ್ನು ಮಧ್ಯಪ್ರದೇಶ ಮೂಲದ ಸಂತೋಷ ಕುಮಾರ್ (24) ಎಂದು ಗುರುತಿಸಲಾಗಿದೆ.
ರೈಲು ಮೂಡ್ಲಕಟ್ಟೆ ರೈಲು ನಿಲ್ದಾಣ ಹಾದು ಹೋಗುವ ವೇಳೆ ಸಿಗ್ನಲ್ ಎಕ್ಸ್ಚೇಂಜ್ ಮಾಡುವಾಗ ಈ ಯುವಕ ಹಳಿ ದಾಟಲು ಪ್ರಯತ್ನಿಸಿದ್ದು, ಆಗ ರೈಲು ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ತಲೆ ಹಾಗೂ ಕೈಗೆ ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲಿಯೇ ಬಿದ್ದು ಮೃತಪಟ್ಟಿದ್ದಾನೆ.
ಈ ಕುರಿತು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

