ವಾಯುಭಾರ ಕುಸಿತದಿಂದ ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು ನಾಳೆ ಆಗಸ್ಟ್ 28 ಗುರುವಾರ ಉತ್ತರಕನ್ನಡ ಜಿಲ್ಲೆಯ ಹತ್ತು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ,ಶಿರಸಿ , ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಜೋಯಿಡಾ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

