ಮಂಗಳೂರಿನ ತಲಪಾಡಿ ಟೋಲ್ ಗೇಟ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ರಿಕ್ಷಾ ಮತ್ತು ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ರಿಕ್ಷಾದಲ್ಲಿದ್ದ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ನಾಲ್ಕು ಮಹಿಳೆಯರು, ಒಂದು ಮಗು ಮತ್ತು ರಿಕ್ಷಾ ಚಾಲಕ ಸೇರಿದ್ದಾರೆ.
ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಾಗಿದೆ.

