ಕುಂದಾಪುರ ತಾಲೂಕಿನ ಹೆಸ್ಕುತ್ರುಸಾನ್ವಿ ಕೋಳಿ ಫಾರ್ಮ್ ಸಮೀಪ ಅಕ್ರಮ ಮದ್ಯ ಮಾರಾಟಮಾಡುತ್ತಿದ್ದ ವ್ಯಕ್ತಿಯನ್ನು ದಸ್ತಗಿರಿ ಮಾಡಿ, ಮದ್ಯ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಶೇಷಾದ್ರಿ (43) ಎಂದು ಗುರುತಿಸಲಾಗಿದೆ.
ಗಣೇಶ ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಸಿದ್ದರೂ, ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿರುವುದು ಕಂಡುಬಂದಿರುತ್ತದೆ. ಆರೋಪಿಯಿಂದ ಒಟ್ಟು ರೂ.13,650 ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ.56/2025 ರಂತೆ ಪ್ರಕರಣ ದಾಖಲಾಗಿದೆ.

