ವಾಯುಭಾರ ಕುಸಿತದಿಂದ ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇಂದು ಬೆಳಿಗ್ಗೆಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು ಆಗಸ್ಟ್ 31 ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟಂಬರ್ 1 ರ ವರೆಗೆ ಗಂಟೆಗೆ 60 ಕಿ ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಛತ್ತಿಸ್ ಘರ್ ನಲ್ಲಿ ಲೋ ಫ್ರೇಜರ್ ಸಿಸ್ಟಮ್ ಇರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸೆ.3 ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

