
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿ ಬುಧವಾರ ಲಾರಿ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾರೆ.
ಮೃತರನ್ನು ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಯಾನೆ ಬಾಲು (44) ಎಂದು ಗುರುತಿಸಲಾಗಿದೆ. ಗಾರೆ ಕಾರ್ಮಿಕರಾಗಿದ್ದ ಬಾಲು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

