
ದಿನಾಂಕ 05-08-2025 ರಂದು ಮುಂಜಾನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ ಬಳಿ ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿಯವರು ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾಯುತ್ತಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ KA53MH5847 ನೇ ಕಾಫಿ ಬಣ್ಣದ ಫಾರ್ಚುನರ್ ಕಾರು ಬಂದಿದ್ದು ಅದನ್ನು ಪರಿಶೀಲಿಸಲಾಗಿ ಸದರಿ ಕಾರಿನ ಒಳಗಡೆ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಿದ್ದನ್ನು ಕಂಡಾಗ ಕಾರಿನ ಚಾಲಕ ಪೊಲೀಸರನ್ನು ಉದ್ದೇಶಿಸಿ ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ ಎಂದು ಹೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದು ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು ಉಳಿದ ಆರೋಪಿಗಳು ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರನ್ನು ಚಲಾಯಿಸಿ ಗಾಯಗೊಳಿಸಿ ಪರಾರಿಯಾಗಿರುತ್ತಾರೆ.
ಬಳಿಕ ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ರವರು ನೀಡಿದ ದೂರಿನ ಮೇರೆಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾರಿನಲ್ಲಿದ್ದ ಉಳಿದ ಆರೋಪಿಗಳಾದ ಸಫ್ವಾನ್ ಕಾಪು, ಅಜೀಂ ಕಾಪು ಮತ್ತು ರಾಜಿಕ್ ಬಜಪೆ ಎಂಬವರ ದಸ್ತಗಿರಿ ಬಗ್ಗೆ ಪಡುಬಿದ್ರಿ ಪೊಲೀಸರು ಪ್ರಯತ್ನದಲ್ಲಿದ್ದು. ಆರೋಪಿಗಳಾದ ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂಬವರು ತಮಿಳುನಾಡು ಹಾಗು ಕೇರಳ ರಾಜ್ಯಗಳಲ್ಲಿ ತಲೆಮರಿಸಿಕೊಂಡಿದ್ದು ಬಳಿಕ ಬಜಪೆ ಬಂದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ದಿನಾಮಕ 06/09/2025ರ ಬೆಳಿಗ್ಗೆ ಅವರುಗಳನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
ಆರೋಪಿ ಮೊಹಮ್ಮದ್ ರಾಜಿಕ್ ಬಜ್ಪೆ ಎಂಬತನ ಮೇಲೆ ಬಜಪೆ ಪೊಲೀಸ್ ಠಾಣೆಯಲ್ಲಿ ಅಕ್ರಮ ಗೋ ಸಾಗಾಟದ ಬಗ್ಗೆ ಪ್ರಕರಣ ದಾಖಲಾಗಿ ನ್ಯಾಯಾಲಯದ ವಿಚಾರಣೆಯಲ್ಲಿ ಇರುತ್ತದೆ.
ಇನ್ನೋರ್ವ ಆರೋಪಿ ಮೊಹಮ್ಮದ್ ಅಜಿಮ್ ಕಾಪು ಎಂಬಾತನ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಅಕ್ರಮ ಗೋಸಾಗಾಟದ ಬಗ್ಗೆ ಪ್ರಕರಣ ದಾಖಲಾಗಿ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ,ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಸೆಂಟ್ರಿಂಗ್ ಸಾಮಗ್ರಿಗಳ ಕಳ್ಳತನ ಬಗ್ಗೆ ಪ್ರಕರಣ ದಾಖಲಾಗಿ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇರುತ್ತದೆ. ಅಲ್ಲದೇ ಈತನು ಉತ್ತರ ಕನ್ನಡ ಜಿಲ್ಲೆಯ ಚಿತ್ತಾಕುಲ ಮತ್ತು ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನ ಕಳ್ಳತನ ಪ್ರಕರಣದಲ್ಲಿ ದಸ್ತಗಿರಿ ಆಗದೆ ತಲೆಮರೆಸಿಕೊಂಡಿರುತ್ತಾನೆ.
ಉಡುಪಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಶ್ರೀ ಹರಿರಾಮ್ ಶಂಕರ IPS ರವರ ಆದೇಶದಂತೆ, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಸುಧಾಕರ ನಾಯ್ಕ್ ಮತ್ತು ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾI ಹರ್ಷ ಪ್ರಿಯಂವಧ IPS ರವರ ಮಾರ್ಗದರ್ಶನದಂತೆ ಕಾಪು ವೃತ್ತ ನಿರೀಕ್ಷಕರಾದ ಜಯಶ್ರೀ ಮಾನೆ ರವರ ನೇತೃತ್ವದಲ್ಲಿ ಪಡುಬಿದ್ರಿ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಸಕ್ತಿವೇಲು ಇ ( ಕಾ.ಸು) ಮತ್ತು ಅನಿಲ್ ಕುಮಾರ್(ತನಿಖೆ) ಸಿಬ್ಬಂದಿಗಳಾದ ಎ ಎಸ್ ಐ ರಾಜೇಶ್ ಪಿ, ಹೆಡ್ ಕಾನ್ಸ್ಟೇಬಲ್ ನಾಗರಾಜ ಕಾನ್ಸ್ಟೇಬಲ್ ಕೃಷ್ಣರಾಜ ಹೆಗಡೆ, ಸಂದೇಶ ಮಹಿಳಾ ಕಾನ್ಸ್ಟೇಬಲ್ ರುಕ್ಮಿಣಿ ರವರು ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಪತ್ತೆಗೆ ಸಹಕರಿಸಿರುತ್ತಾರೆ.

